* ರಾಷ್ಟ್ರಪಿತ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ, ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಇಂದು(ಜ.21) ಮಹಾತ್ಮ ಗಾಂಧೀಜಿಯ ಕಂಚಿನ ಪುತ್ಥಳಿ ಅನಾವರಣಗೊಂಡಿತು.* ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಲೋಕಾರ್ಪಣೆಗೊಳಿಸಿದರು.*ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರು ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಅನೇಕ ನಾಯಕರು ಈ ವೇಳೆ ಉಪಸ್ಥಿತರಿದ್ದರು.* ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅನಾರೋಗ್ಯದಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು.* ಪುತ್ಥಳಿ ಅನಾವರಣ ಬಳಿಕ ಮಾತನಾಡಿದ ಖರ್ಗೆ "ಗಾಂಧೀಜಿಯ ಜೀವನವೇ ಸಂದೇಶವಾಗಿದೆ, ಅವರು ಇಡೀ ಜಗತ್ತಿನಲ್ಲಿ ಗೌರವಿಸಲಾಗಿದ್ದಾರೆ. ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಗಾಂಧೀಜಿಯ ಪುತ್ಥಳಿ ಉದ್ಘಾಟನೆ ನನ್ನ ಕೈಯಿಂದ ಆಗಿದ್ದು, ಅದು ನನ್ನ ಜೀವನದ ಗೌರವವಾಗಿದೆ ಎಂದರು.