Job Description: * ಸರ್ಕಾರವು ಕನ್ನಡ ಮಾತೆ 'ಭುವನೇಶ್ವರಿ'ಯ ಬೃಹತ್ ಮೂರ್ತಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು. ಅದೇ ರೀತಿ, ಇಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದೆ.* 3ನೇ 'ವಿಶ್ವ ಕನ್ನಡ ಸಮ್ಮೇಳನ'ವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರ ಬದುಕು ಹಾಗೂ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಪಠ್ಯಪುಸ್ತಕಗಳಲ್ಲಿ ಅವರ ಜೀವನದ ಬಗ್ಗೆ ಅಳವಡಿಸಲಾಗುತ್ತದೆ.* ನಾಡು-ನುಡಿ ಹಾಗೂ ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 12 ಕೋಟಿ ನೆರವು ನೀಡಲು ಉದ್ದೇಶಿಸಲಾಗಿದೆ.* ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ರ ನೀಡಲಾಗುವುದು. ಹಾಗೆಯೇ, ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ 150 ಕೋಟಿ ಒದಗಿಸಲಾಗುವುದು. 'ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ' ಎಂಬ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ, 'ಜಾನಪದ ಹಬ್ಬ' ಆಯೋಜಿಸಲಾಗುವುದು ಎಂದು ಹೇಳಾಲಾಗಿದೆ.