* 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್‌ ಸತ್ಯು ಅವರನ್ನು ಕರ್ನಾಟಕ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. * ಮಾರ್ಚ್ 7 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.* ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ ಎಸ್ ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ‘ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.* ಅವರ ನಿರ್ದೇಶನದ ಹಿಂದಿ ಚಿತ್ರ ‘ಗರಂ ಹವಾ’ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ ಕನ್ನಡದ 'ಬರ' ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದರು. *  ಎಂ ಎಸ್ ಸತ್ಯು ಅವರು ಜುಲೈ 6, 1930 ರಂದು ಜನಿಸಿದವರು (ಮೈಸೂರು ಶ್ರೀನಿವಾಸ ಸತ್ಯು). ಕನ್ನಡದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಸತ್ಯು ಅವರು ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದುಕೊಂಡಿದ್ದರು.