* ಭಾರತ ಮತ್ತು ಕೆನಡಾ ಭಯೋತ್ಪಾದನೆ ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.* ಗುರುವಾರ(ಸೆಪ್ಟೆಂಬರ್ 17) ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾರತದ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಮತ್ತು ಕೆನಡಾದ ಭದ್ರತಾ ಸಲಹೆಗಾರ ನಥಾಲಿ ಡ್ರೌಯಿನ್ ಉಭಯ ರಾಷ್ಟ್ರಗಳ ನಡುವೆ ವಿಶ್ವಾಸ ಮರುಸ್ಥಾಪನೆ ಹಾಗೂ ಸಹಕಾರ ವೃದ್ಧಿಗೆ ಒಪ್ಪಿಗೆ ಸೂಚಿಸಿದರು.* ಸಭೆಯಲ್ಲಿ ಭದ್ರತಾ ಸಹಕಾರ ಬಲಪಡಿಸುವುದರ ಜೊತೆಗೆ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತ ಅಭಿಪ್ರಾಯ ವಿನಿಮಯವೂ ನಡೆಯಿತು.* ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದ ಉಂಟಾದ ರಾಜತಾಂತ್ರಿಕ ವೈಮನಸ್ಸಿನ ಬಳಿಕ, ಜಿ–7 ಶೃಂಗದಲ್ಲಿ ಪ್ರಧಾನಿ ಮೋದಿ ಮತ್ತು ಕೆನಡಾ ಪ್ರಧಾನಿಯ ಮಾತುಕತೆ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ದಾರಿ ಮಾಡಿಕೊಟ್ಟಿತ್ತು. ಅದರ ಮುಂದುವರಿದ ಭಾಗವಾಗಿ ಈ ಸಭೆ ನಡೆದಿತು.