* ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ನಡುವೆ ಜೈಪುರದಲ್ಲಿ ಜ.25 ರಾತ್ರಿ ನಡೆದ ಸಭೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಪಾಲುದಾರಿಕೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರ ಅವರು ತಿಳಿಸಿದ್ದಾರೆ.* ಭಾರತ ಮತ್ತು ಫ್ರಾನ್ಸ್ ಹಲವು ಒಪ್ಪಂದಗಳಿಗೆ ಸಹಿ ಹಾಕಿವೆ, ಒಪ್ಪಂದಗಳು ಈ ಕೆಳಗಿನಂತಿವೆ.-  ಸೇನಾ ಕೈಗಾರಿಕೆಗಳಲ್ಲಿ ಬಳಸುವ ಹಾರ್ಡ್‌ವೇರ್ ಮತ್ತು ತಂತ್ರಜ್ಞಾನಗಳನ್ನು ಜಂಟಿಯಾಗಿ ಅಭಿ ವೃದ್ಧಿಪಡಿಸುವ ಹಾಗೂ ಉತ್ಪಾದನೆಯನ್ನು ಉತ್ತೇಜಿಸುವ ವಿಷಯದಲ್ಲಿ ಸಹಭಾಗಿತ್ವಕ್ಕೆ ಭಾರತ ಮತ್ತು ಫ್ರಾನ್ಸ್ ಸಮ್ಮತಿಸಿವೆ.- 'ರಕ್ಷಣೆ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪಾಲುದಾರಿಕೆ ಜೊತೆಗೆ, ಬಾಹ್ಯಾಕಾಶ, ಸೈಬ‌ರ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಸಹಭಾಗಿತ್ವಕ್ಕೆ ಉಭಯ ನಾಯಕರು ಸಮ್ಮತಿಸಿದರು. - ಟಾಟಾ ಸಮೂಹ ಹಾಗೂ 'ಏರ್‌ಬಸ್ ಹೆಲಿಕಾಪ್ಟರ್ಸ್ ಜಂಟಿಯಾಗಿ ಎಚ್-125 ಹೆಲಿಕಾಪ್ಟರ್ ಗಳನ್ನು ತಯಾರಿಸುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿದವು. - 'ರೋಬೊಟಿಕ್ಸ್, ಸ್ವಯಂಚಾ ವಾಹನಗಳ ತಯಾರಿಕೆ ಮತ್ತು ಸೈಬದ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಯ ಸಹಕಾರ ಹೆಚ್ಚಿಸಲು ಎರಡೂ ದೇಶಗಳ ಒಪ್ಪಂದ ಮಾಡಿಕೊಂಡವು.- 'ಉಪಗ್ರಹಗಳ ಉಡ್ಡಯನದು ಸಹಕಾರ ವಿಸ್ತರಿಸುವುದಕ್ಕೆ ಸಂಬಂಧಿಸ ಇಸ್ರೋ ಅಂಗಸಂಸ್ಥೆ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್‌ ಹಾಗೂ ಫ್ರಾನ್ಸ್- ಏರಿಯನ್‌ಸ್ಪೇಸ್ ಸಂಸ್ಥೆ ಒಪ್ಪಂದಕ್ಕೆ ಸಹಿ ಹಾಕಿದವು' ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರ ಅವರು ಶುಕ್ರವಾರ ತಿಳಿಸಿದ್ದಾರೆ.* ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌ ಅವರು ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸಿದ್ದಾರೆ. 2030ರ ವೇಳೆಗೆ 30,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‌ನಲ್ಲಿ ಅಧ್ಯಯನ ನಡೆಸಲು ಸಾಧ್ಯವಾಗಿಸುವ ಗುರಿಯಿದೆ ಎಂದು ಅವರು ತಿಳಿಸಿದ್ದಾರೆ.