* ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ನವೆಂಬರ್ 11 ರಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಜೀವ್ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. * ನ್ಯಾಯಮೂರ್ತಿ ಖನ್ನಾ ಅವರು 51 ನೇ ಸಿಜೆಐ ಆಗಲಿದ್ದು, ಸುಮಾರು 6 ತಿಂಗಳ ಮೇ 13, 2025 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.* ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಅಕ್ಟೋಬರ್ 16 ರಂದು ನ್ಯಾಯಮೂರ್ತಿ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ ನಂತರ ಅಕ್ಟೋಬರ್ 24 ರಂದು ಕೇಂದ್ರವು ನ್ಯಾಯಮೂರ್ತಿ ಖನ್ನಾ ಅವರನ್ನು ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಕ ಮಾಡಲು ಅನುಮೋದನೆ ನೀಡಿತು.* "ಭಾರತದ ಸಂವಿಧಾನದ 124 ನೇ ವಿಧಿಯ ಕಲಂ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ ರಾಷ್ಟ್ರಪತಿಯವರು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು 2024 ರ ನವೆಂಬರ್ 11 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ" ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.* ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಅವರು 370 ನೇ ವಿಧಿ ವ್ಯಭಿಚಾರವನ್ನು ಅಪರಾಧಮುಕ್ತಗೊಳಿಸುವುದು, ಚುನಾವಣಾ ಬಾಂಡ್ ಯೋಜನೆ, ಇವಿಎಂ-ವಿವಿಪ್ಯಾಟ್ ಎಣಿಕೆ ಇತ್ಯಾದಿ ಪ್ರಕರಣಗಳ ಐತಿಹಾಸಿಕ ತೀರ್ಪುಗಳ ಭಾಗವಾಗಿದ್ದಾರೆ.* ದೆಹಲಿ ಮೂಲದ ಪ್ರಸಿದ್ಧ ಕುಟುಂಬದಿಂದ ಬಂದಿರುವ ಜಸ್ಟಿಸ್ ಖನ್ನಾ ಅವರು ದೆಹಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ದೇವ್ ರಾಜ್ ಖನ್ನಾ ಅವರ ಪುತ್ರ ಮತ್ತು ಪ್ರಮುಖ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ 1973ರ ಐತಿಹಾಸಿಕ ಕೇಶವಾನಂದ ಭಾರತಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ಎಚ್‌.ಆರ್‌ ಖನ್ನಾ ಅವರ ಸೋದರಳಿಯರಾಗಿದ್ದಾರೆ.  * ಜನವರಿ 18, 2019 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಅವರ ಕುಟುಂಬದ ಮೂರನೇ ತಲೆಮಾರಿನ ವಕೀಲರಾಗಿದ್ದರು.