* ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) 2024ನೇ ಸಾಲಿನ ಪುರುಷರ T-20 ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ತಂಡದ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.* 2024ರಲ್ಲಿ ಭಾರತ ತಂಡವು ಅಮೆರಿಕ ಹಾಗೂ ಕೆರೆಬಿಯನ್ ಜಂಟಿ ಆತಿಥ್ಯದಲ್ಲಿ ನಡೆದ ICC T-20 ವಿಶ್ವಕಪ್ ಗೆಲ್ಲುವಲ್ಲಿ ಅರ್ಷದೀಪ್ ಮಹತ್ವದ ಪಾತ್ರ ವಹಿಸಿದ್ದರು.* 25 ವರ್ಷದ ಅರ್ಷದೀಪ್ ಕಳೆದ ವರ್ಷ ಆಡಿರುವ 18 ಪಂದ್ಯಗಳಲ್ಲಿ ಒಟ್ಟು 36 ವಿಕೆಟ್ಗಳನ್ನು ಗಳಿಸಿದ್ದರು. ಟಿ20 ವಿಶ್ವಕಪ್ನಲ್ಲಿ ಎಂಟು ಪಂದ್ಯಗಳಲ್ಲಿ 17 ವಿಕೆಟ್ಗಳನ್ನು ಗಳಿಸಿದ್ದರು.* ಪಾಕಿಸ್ತಾನದ ಬಾಬರ್ ಆಜಂ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅವರನ್ನು ಹಿಂದಿಕ್ಕಿ ಅರ್ಷದೀಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಐಸಿಸಿ ವರ್ಷದ ಪುರುಷರ ಟಿ20 ಕ್ರಿಕೆಟ್ ತಂಡದಲ್ಲೂ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿದ್ದಾರೆ.* ಇನ್ನೂ ನ್ಯೂಜಿಲೆಂಡ್ನ ಅಮೆಲಿಯಾ ಕೆರ್ 2024 ರ ಐಸಿಸಿ ಮಹಿಳಾ T20I ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದಿದ್ದಾರೆ.* 2024ರಲ್ಲಿ 18 ಪಂದ್ಯಗಳಲ್ಲಿ 29 ವಿಕೆಟ್ಗಳನ್ನು ಗಳಿಸಿದ್ದರು. ಸೆಪ್ಟೆಂಬರ್ನಲ್ಲಿ ಮ್ಯಾಕ್ಕೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ 4/20 ಬೌಲಿಂಗ್ಗೆ ಅತ್ಯುತ್ತಮ ಪ್ರದರ್ಶನ ನೀಡಿದರು.