* ಪಶ್ಚಿಮ ಬಂಗಾಳದ ಕಿರೀಟೇಶ್ವರಿ ಗ್ರಾಮದಲ್ಲಿ ಕೋಮು ಸಾಮರಸ್ಯ ಮತ್ತು ವಿಶಿಷ್ಟ ವಾಸ್ತುಶಿಲ್ಪಕ್ಕಾಗಿ ಭಾರತೀಯ ಪ್ರವಾಸೋದ್ಯಮ ಇಲಾಖೆಯಿಂದ ದೇಶದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಹೆಸರಿಸಿದೆ.* 51 ಶಕ್ತಿ ಪೀಠಗಳಲ್ಲಿ ಒಂದಾದ ಕಿರೀಟೇಶ್ವರಿ ದೇವಸ್ಥಾನವನ್ನು ಹೊಂದಿರುವ ಮುರ್ಷಿದಾಬಾದ್‌ನಿಂದ 18 ಕಿಮೀ ದೂರದಲ್ಲಿರುವ ಕಿರೀಟೇಶ್ವರಿ ಗ್ರಾಮವನ್ನು ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಕೇಂದ್ರವು ಘೋಷಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.* 2023 ರ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯಲ್ಲಿ 31 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ 795 ಅರ್ಜಿಗಳನ್ನು ಸ್ವೀಕರಿಸಿದ್ದು, ಸೆಪ್ಟೆಂಬರ್ 27 ರಂದು ನವದೆಹಲಿಯಲ್ಲಿ ಪ್ರಶಸ್ತಿಗಳನ್ನು ನೀಡಲಿದೆ.