Job Description: * ಕಾರ್ತಿಕಿ ಗೋನ್ಸ್‌ಸ್ಲೇವ್ಸ್‌ ನಿರ್ದೇಶನ ಹಾಗು ಗುನೀತ್ ಮೊಂಗಾ ಅವರ ನಿರ್ಮಾಣದ ‘ದ ಎಲಿಫೆಂಟ್‌ ವಿಸ್ಪರರ್ಸ್‌’ ಎಂಬ ಡಾಕ್ಯುಮೆಂಟರಿಗೆ ಆಸ್ಕರ್‌ ಪ್ರಶಸ್ತಿ ದೊರೆಕಿದೆ. ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ದೊರೆಕಿದ್ದು, 'ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.* ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಅನಾಥ ಆನೆಯನ್ನು ದತ್ತು ತೆಗೆದುಕೊಳ್ಳುವ ಕುಟುಂಬದ ಕಥೆಯು ಸಾಕ್ಷ್ಯಚಿತ್ರದ ಕಥಾವಸ್ತುವಾಗಿದ್ದು, ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆ ಇದರಲ್ಲಿದೆ. * ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಮನಸ್ಸಿಗೆ ನಾಟುವಂತೆ ಚಿತ್ರಿಸಲಾಗಿದೆ. ಭಾವನೆಯ ಜೊತೆಗೆ ಪ್ರಾಣಿಗಳು ಮತ್ತು ಮಾನವನ ನಡುವಿನ ಪ್ರೀತಿಯ ಸೆಳೆತ ಕಣ್ಣಿಗೆ ಕಟ್ಟುವಂತೆ ಡಾಕ್ಯುಮೆಂಟರಿಯಲ್ಲಿ ಮೂಡಿಬಂದಿದೆ. ಇದೀಗ 41 ನಿಮಿಷಗಳ ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಭಾರತಕ್ಕೆ ಕೀರ್ತಿ ತಂದಿದೆ.