* ಹಿಂದೂ ಮಹಾಸಾಗರ ಪ್ರದೇಶದಲ್ಲಿನ ವಿವಿಧ ಸವಾಲುಗಳನ್ನು ಎದುರಿಸಲು ಭಾರತದ ಜನೌಷದ ಯೋಜನೆಗೆ ಭಾರತ ಮತ್ತು ಮಾರಿಷಸ್ ಜೊತೆಯಾಗಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಯೋಜನೆ ಸೇರಲಿರುವ ಮಾರಿಷಸ್ ಮೊದಲ ದೇಶವಾಗಲಿದೆ ಎಂದರು.* ಭಾರತದ ಆರ್ಥಿಕ ನೆರವಿನಿಂದ ದ್ವೀಪರಾಷ್ಟ್ರದಲ್ಲಿ ಕೈಗೊಂಡಿರುವ ಹಲವು ಅಭಿವೃದ್ಧಿ ಯೋಜನೆಗಳನ್ನು ಫೆಬ್ರುವರಿ 29 ರಂದು (ಗುರುವಾರ) ವರ್ಚುವಲ್‌ ಆಗಿ ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.* ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜಗನ್ನಾಥ್ ಅವರು ಇದೇ ವೇಳೆ ಜಂಟಿಯಾಗಿ ವಿವಿಧ ಸಮುದಾಯ ಅಭಿವೃದ್ಧಿ ಯೋಜನೆಗಳನ್ನೂ ಲೋಕಾರ್ಪಣೆಗೊಳಿಸಿದರು.* ಮಾರಿಷಸ್ ನಲ್ಲಿ ಇತ್ತೀಚೆಗೆ ಭಾರತದ ಡಿಜಿಟಲ್ ಪಾವತಿ ಸೇವೆ (ಯುಪಿಐ) ಮತ್ತು ರೂಪೇ ಕಾರ್ಡ್ ಸೇವೆಯನ್ನು ಆರಂಭಿಸಲಾಗಿತ್ತು.* 'ಹಿಂದೂಮಹಾಸಾಗರ ಪ್ರದೇಶದಲ್ಲಿ ಎದುರಾಗುತ್ತಿರುವ ಸವಾಲುಗಳು ನಮ್ಮ ಅರ್ಥವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಪ್ರದೇಶದಲ್ಲಿ ಭದ್ರತೆ, ಅಭಿವೃದ್ಧಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಮಾರಿಷಸ್ ಪರಸ್ಪರ ಸಹಕಾರದೊಂದಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿವೆ' ಎಂದು ತಿಳಿಸಿದರು.* 'ಹೊಸ ಜೆಟ್ಟಿ, ರನ್‌ವೇ ಹಾಗೂ ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವುದರೊಂದಿಗೆ ನಾವು ಇತಿಹಾಸ ನಿರ್ಮಿಸಿದ್ದೇವೆ.