* ಅತ್ಯುತ್ತಮ ಸಿನಿಮಾಗಳಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಎಂದು ಆಸ್ಕರ್ (Oscar) ಅನ್ನು ಗುರುತಿಸಲಾಗುತ್ತದೆ. ಹಾಗೆಯೇ ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು ಕರೆಯಲಾಗುತ್ತದೆ.* ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆ ಭಾರತದ ಜನಪ್ರಿಯ ಕಮಿಡಿಯನ್ ವೀರ್ ದಾಸ್ ಅವರು ಪ್ರತಿಷ್ಠಿತ ಎಮ್ಮಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.* ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮ್ ಆಗುತ್ತಿರುವ ವೀರ್ ದಾಸ್ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್’ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.* ವೀರ್ ದಾಸ್ ಮಾತ್ರವೇ ಅಲ್ಲದೆ ಭಾರತೀಯ ಟಿವಿ ಜಗತ್ತಿನ ರಾಣಿ ಎಂದೇ ಕರೆಯಲಾಗುವ ಏಕ್ತಾ ಕಪೂರ್ಗೂ ಈ ಪ್ರಶಸ್ತಿ ಲಭಿಸಿದೆ. ಭಾರತೀಯ ಟೆಲಿವಿಷನ್ ಜಗತ್ತಿನಲ್ಲಿ ತಂಡ ಬದಲಾವಣೆ ಹಾಗೂ ವೃತ್ತಿಜೀವನದ ಸಾಧನೆಗಾಗಿ ಏಕ್ತಾ ಕಪೂರ್ ಅವರಿಗೆ ಎಮ್ಮಿ ಡೈರೆಕ್ಟೊರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.* ಈ ಪ್ರಶಸ್ತಿಯನ್ನು ‘ಡೆರ್ರಿ ಗರ್ಲ್ಸ್-ಸೀಸನ್ 3’ ಜೊತೆಗೆ ಹಂಚಿಕೊಳ್ಳಲಾಗಿದೆ. ‘ವೀರ್ ದಾಸ್; ಲ್ಯಾಂಡಿಂಗ್’ ಹಾಗೂ ‘ಡೆರ್ರಿ ಗರ್ಲ್ಸ್-ಸೀಸನ್ 3’ ಎರಡೂ ಶೋಗಳಿಗೆ ಜಂಟಿಯಾಗಿ ಪ್ರಶಸ್ತಿಯನ್ನು ನೀಡಲಾಗಿದೆ.