Job Description: * 1960ರ ದಶಕದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗರಾಗಿದ್ದ ಸಲೀಂ ದುರಾನಿ ಅವರು ರವಿವಾರ (ಎಪ್ರಿಲ್.2) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. * ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಘಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. * ಎಡಗೈ ಆಲ್‌ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.