* ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್( Emmanuel Macron)ಅವರು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಫ್ರಾನ್ಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್( Grand Cross of the Legion of Honour) ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.* ಪ್ರಧಾನಿ ಮೋದಿಯವರಿಗಿಂತ ಮೊದಲು, ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ ವೇಲ್ಸ್ ರಾಜಕುಮಾರ ಕಿಂಗ್ ಚಾರ್ಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ಆಗಿನ ಪ್ರಿನ್ಸ್ ಆಫ್ ವೇಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಇತರ ನಾಯಕರು ಈ ಪ್ರಶಸ್ತಿಗೆ ಪಾತ್ರರಾಗಿದ್ದರು.* ಪ್ರಶಸ್ತಿ ಪ್ರದಾನ ಸಮಾರಂಭವು ಎಲಿಸೀ ಪ್ಯಾಲೇಸ್ನಲ್ಲಿ ನಡೆಯಲಾಗಿದ್ದು, ಅಲ್ಲಿ ಮ್ಯಾಕ್ರನ್ ಅವರು ಪ್ರಧಾನಿ ಮೋದಿಯವರಿಗೆ ಖಾಸಗಿ ಔತಣಕೂಟಕ್ಕೆ ಆತಿಥ್ಯ ನೀಡಿದ್ದಾರೆ.