* ನಮ್ಮ ದೇಶದಲ್ಲಿ ಮೊದಲ ಬಾರಿಗೆ ಅಂಡರ್ ವಾಟರ್ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇಂದು (ಮಾ.6) ಈ ಮೆಟ್ರೋ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. * ಈ ನೀರೊಳಗೆ ಚಲಿಸುವ ಮೆಟ್ರೋ ರೈಲು ಸೇವೆಗಳು ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದಲ್ಲಿ ಆರಂಭವಾಗಲಿದೆ. ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾಗಿರುವ ಸುರಂಗದ ಮೂಲಕ ಈ ಮೆಟ್ರೋ ರೈಲುಗಳು ಚಲಿಸಲಿವೆ.* ಕೋಲ್ಕತಾ ಹಾಗೂ ಹೌರಾ ನಗರವನ್ನು ಸಂಪರ್ಕಿಸುವ ಈ ಮೆಟ್ರೋ ರೈಲು ಪಶ್ಚಿಮ ಬಂಗಾಳದ ಜೀವನಾಡಿ ಎಂದೇ ಗುರುತಿಸಿಕೊಂಡಿದೆ. ಈ ಎರಡು ಅವಳಿ ನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮೆಟ್ರೋ ರೈಲು ಹೂಗ್ಲಿ ನದಿಯ ನೀರಿನೊಳಗಿನಿಂದ ಸಾಗಲಿದೆ. * ಈ ರೈಲು ಮಾರ್ಗದಲ್ಲಿ ಒಟ್ಟು 6 ನಿಲ್ದಾಣಗಳನ್ನು ಹೊಂದಿದೆ. ಒಟ್ಟು 16.6 ಕಿಲೋಮೀಟರ್ ಉದ್ದದ ಈ ರೈಲು ಮಾರ್ಗವನ್ನು ಮೋದಿ ಉದ್ಘಾಟಿಸಲಿದ್ದಾರೆ. ಈ ಪೈಕಿ 4. 8 ಕಿಲೋಮೀಟರ್ ಹೂಗ್ಲಿ ನದಿಯ ಆಳದಿಂದ ಸಾಗಲಿದೆ. * ಈ ಮೆಟ್ರೋ ರೈಲು 45 ಸೆಕೆಂಡ್ ಹೂಗ್ಲಿ ನದಿ ನೀರಿನ ಅಡಿಯಲ್ಲಿನ ಸುರಂಗದಲ್ಲಿ ಸಾಗಲಿದೆ. ಇದು ಭಾರತದ ಮೊದಲ ಅಂಡರ್ ವಾಟ‌ರ್ ಮೆಟ್ರೋ ರೈಲು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.