* ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಮಹಾನಿರ್ದೇಶಕ (ಡಿಜಿ) ರಾಕೇಶ್ ಪಾಲ್ ಅವರು ಚೆನ್ನೈನ ಆಗಸ್ಟ್ 18  ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.* ಪಾಲ್ ಅವರು ಕರಾವಳಿ ಪಡೆಯ 25ನೇ ಮಹಾನಿರ್ದೇಶಕರಾಗಿ ಕಳೆದ ವರ್ಷ ಅಧಿಕಾರ ವಹಿಸಿಕೊಂಡಿದ್ದರು. 34 ವರ್ಷಗಳ ವೃತ್ತಿಜೀವನದಲ್ಲಿ ಅವರು ನೌಕಾಪಡೆ ಮತ್ತು ಕರಾವಳಿ ಪಡೆಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ.* ರಾಕೇಶ್ ಪಾಲ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಬಂದಿದ್ದರು. ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತದೇಹವನ್ನು ನವದೆಹಲಿಗೆ ಕೊಂಡೊಯ್ಯಲು ಎಂದು ಅಧಿಕಾರಿಗಳು ಹೇಳಿದ್ದಾರೆ.* ಪಾಲ್ ಅವರ ನಿಧನವು ‘ಅಕಾಲಿಕ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ‘ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲು ಹಾಕಿದೆ’ ಎಂದು ಹೇಳಿದರು.