* ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನೂತನ ಕಾರ್ಯದರ್ಶಿಯಾಗಿ ಮಾಜಿ ಕೇಂದ್ರ ಸಚಿವ ಅರುಣ್‌ ಜೇಟ್ಲಿಯವರ ಪುತ್ರ ರೋಹನ್‌ ಜೇಟ್ಲಿ ಅವರು ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. * ಜಯ್ ಶಾ ಅವರು ನವೆಂಬರ್‌ನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಯಲಿದ್ದು, ರೋಹನ್‌ ಅವರು ಜಯ್‌ ಶಾ ಅವರ ಸ್ಥಾನವನ್ನು ಅಲಂಕರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. * ಈ ವರ್ಷದ ಆಗಸ್ಟ್‌ನಲ್ಲಿ ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾದರು. BCCI ಕಾರ್ಯದರ್ಶಿ ಡಿಸೆಂಬರ್ 1 ರಿಂದ ICC ಅಧ್ಯಕ್ಷರಾಗಿ ತಮ್ಮ ಕಾರ್ಯವನ್ನು ಪ್ರಾರಂಭಿಸಲಿದ್ದಾರೆ. ಅವರು ICC ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ.* ರೋಹನ್ ಜೇಟ್ಲಿ ಅವರು ಪ್ರಸ್ತುತ ಡಿಡಿಸಿಎ(DDCA) ಅಧ್ಯಕ್ಷರಾಗಿದ್ದರೆ, ಪಟೇಲ್ ಗುಜರಾತ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ.