* ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.* ಭಾರತ ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾಗಿರುವುದಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಬೆಂಬಲಿಗರೊಂದಿಗೆ ಸಂಭ್ರಮಿಸಿದರು. * ಭೂಪೇಂದರ್ ಸಿಂಗ್ ಬಜ್ವಾ ನೇತೃತ್ವದ ಅಡ್‌ಹಾಕ್ ಸಮಿತಿಯು ತೆಗೆದುಕೊಂಡಿದ್ದ ಎಲ್ಲಾ ನಿರ್ಧಾರಗಳನ್ನು ಡಿಸೆಂಬರ್ 21 ರಂದು ಹೊಸದಾಗಿ ಚುನಾಯಿತಗೊಂಡ ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್ಐ) ಸಮಿತಿಯು ರದ್ದುಗೊಳಿಸಿತು.* ಕುಸ್ತಿ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಿತ ಬಣದ ಪ್ರೇಮ್ ಚಂದ್ ಲೋಚಬ್ ಅವರು ಆಯ್ಕೆಯಾಗಿದ್ದಾರೆ.* ನವದೆಹಲಿಯ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಚೇರಿಯಲ್ಲಿ ಡಿಸೆಂಬರ್ 21 ರಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಅನಿತಾ ಶಯೋರಾನ ಅವರ ವಿರುದ್ಧ 47 ಮತಗಳಲ್ಲಿ 40 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.* ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನಿತಾ ಶಯೋರಾನ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ವಿರುದ್ಧ ಸಾಕ್ಷ್ಯವನ್ನು ನೀಡಿದ್ದರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅವರು ಚಿನ್ನದ ಪದಕ ಜಯಿಸಿದ್ದರು. ಅನಿತಾ ಶಯೋರಾನ ಅವರು ಚುನಾವಣೆಯಲ್ಲಿ ಗೆದ್ದು ಭಾರತೀಯ ಕುಸ್ತಿ ಸಂಸ್ಥೆಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.