*  ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಲಂಡನ್‌ನ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.* ಸೆಂಟ್ರಲ್ ಬ್ಯಾಂಕಿಂಗ್ ಅವಾರ್ಡ್ಸ್ 2023 ಪ್ರಶಸ್ತಿ ವಿಜೇತರನ್ನು ಈ ವರ್ಷದ ಮಾರ್ಚ್ ಅಂತ್ಯದಲ್ಲಿ ಘೋಷಿಸಲಾಗಿತ್ತು. ನ್ಯಾಷನಲ್ ಬ್ಯಾಂಕ್ ಆಫ್ ಉಕ್ರೇನ್ ಗೆ 2023 ರ ‘ಸೆಂಟ್ರಲ್ ಬ್ಯಾಂಕ್ ಆಫ್ ದಿ ಇಯರ್’ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ‘ಗವರ್ನರ್ ಆಫ್ ದಿ ಇಯರ್’ ಪ್ರಶಸ್ತಿ ಲಭಿಸಿದೆ.* ಶಕ್ತಿಕಾಂತ ದಾಸ್ (ನಿವೃತ್ತ IAS ಅಧಿಕಾರಿ) ಡಿಸೆಂಬರ್ 12, 2018 ರಂದು ಭಾರತೀಯ ರಿಸರ್ವ್ ಬ್ಯಾಂಕ್‌ನ 25 ನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡರು. ಇದಕ್ಕಿಂತ ಮೊದಲು ಅವರು ಭಾರತದ 15 ನೇ ಹಣಕಾಸು ಆಯೋಗದ ಮುಖ್ಯಸ್ಥ ಮತ್ತು G20 ಶೆರ್ಪಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.