* 2023 ರಲ್ಲಿ ಒಟ್ಟು 39 ಕ್ರೀಡೆಗಳಲ್ಲಿ ಭಾರತದ 655 ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು ಪಾಲ್ಗೊಳ್ಳಲಿದ್ದಾರೆ.* 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡವು 70 ಪದಕಗಳನ್ನು (16 ಚಿನ್ನ, 23 ಬೆಳ್ಳಿ ಹಾಗೂ 31 ಕಂಚು) ಜಯಿಸಿತ್ತು. ಈ ಬಾರಿ ನೂರರ ಗಡಿ ದಾಟುವ ಆತ್ಮವಿಶ್ವಾಸದಲ್ಲಿ ಭಾರತ ತಂಡವಿದೆ.* 2021ರಲ್ಲಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ ಕೂಟದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿತ್ತು. ಮುಂದಿನ ವರ್ಷ (2024) ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್‌ ಕೂಟಕ್ಕೆ ಅರ್ಹತೆ ಪಡೆಯಲು ಏಷ್ಯನ್ ಕ್ರೀಡಾಕೂಟದಲ್ಲಿ ಅವಕಾಶವಿದೆ. * ಇತ್ತೀಚಿನ ವರ್ಷಗಳಲ್ಲಿ ಭಾರತದ ಕ್ರೀಡಾಪಟುಗಳು ಟ್ರ್ಯಾಕ್ ಮತ್ತು ಫೀಲ್ಡ್, ಈಜು, ಕುಸ್ತಿ, ಶೂಟಿಂಗ್, ಬಾಕ್ಸಿಂಗ್ ಮತ್ತಿತರ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಅದರಿಂದಾಗಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಪದಕ ಗಳಿಕೆಯಾಗುವ ನಿರೀಕ್ಷೆ ಇದೆ.