* ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಡಿಸೆಂಬರ್ 21 ರಂದು ನಡೆದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ 88ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.* ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. * 1926 ಹಾಗೂ 1938 ರಲ್ಲಿ ಬಳ್ಳಾರಿಯಲ್ಲಿ ಸಮೇಳನ ನಡೆದಿತ್ತು, ಸ್ವಾತಂತ್ರ್ಯ ನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಆಧ್ಯಕ್ಷತೆಯಲ್ಲಿ ಸಮೇಳನ ನಡೆದಿತ್ತು, ಇದೀಗ 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ.