* ಚಾಮರಾಜ ನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ದೇಶದಲ್ಲಿಯೇ "ಅತ್ಯುತ್ತಮ ವನ್ಯಧಾಮ ಪ್ರಶಸ್ತಿ"ಯನ್ನು ಎರಡನೇ ಬಾರಿಗೆ ಪಡೆದಿದೆ.* ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ), ವೈಲ್ಡ್ ಲೈಫ್ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಅರಣ್ಯ & ಪರಿಸರ ಸಚಿವಾಲಯವು ಪ್ರತಿ ವರ್ಷ ಸಮೀಕ್ಷೆ ನಡೆಸುವ ಮೂಲಕ ಈ ಪ್ರಶಸ್ತಿ ನೀಡಲಾಗುತ್ತದೆ.* ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಕಾರ್ಯ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.* ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿತ್ತು. ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.* 'ಸಿಬ್ಬಂದಿ ಪರಿಶ್ರಮ ಕಾಡಂಚಿನ ಗ್ರಾಮಗಳ ಜನರ ಸಹಕಾರದಿಂದ ಬಂಡೀಪುರ ವನ್ಯಧಾಮವು ಎರಡನೇ ಭಾರಿಗೆ ಅತ್ಯುತ್ತಮ ವನ್ಯಧಾಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ' ಎಂದು ಹುಲಿ ಯೋಜನೆ ನಿರ್ದೇಶಕ ಪಿ.ರಮೇಶ್ ಕುಮಾರ್ ಅವರು ತಿಳಿಸಿದರು.