Job Description: * ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯವು ಬಂಜಾರ ಸಮುದಾಯದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಗುರು ಸಂತ ಸೇವಾಲಾಲ್ ಮಹಾರಾಜ್ ಅವರ 284ನೇ ಜನ್ಮದಿನ ಆಚರಿಸುತ್ತಿದೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. * ಸಂತ ಸೇವಾಲಾಲ್ ಮಹಾರಾಜರು 1739 ಫೆಬ್ರವರಿ 15ರಂದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸುರಗೊಂಡನಕೊಪ್ಪದಲ್ಲಿ ಜನಿಸಿದರು. ಅವರನ್ನು ಬಂಜಾರ ಸಮುದಾಯದ ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ಗುರು ಎಂದು ಪರಿಗಣಿಸಲಾಗಿದೆ. * ದೇಶಾದ್ಯಂತ ಸುಮಾರು 10ರಿಂದ 12 ಕೋಟಿ ಬಂಜಾರ ಸಮುದಾಯವಿದೆ ಎಂದು ಅಂದಾಜಿಸಲಾಗಿದೆ. 18ನೇ ಶತಮಾನದಲ್ಲಿ ಲಂಬಾಣಿ ಜನಾಂಗದ ಹಕ್ಕಿಗಾಗಿ ಆಗಿನ ನಿಜಾಮರು ಹಾಗೂ ಮೈಸೂರು ಅರಸರೊಂದಿಗೆ ಹೋರಾಟವನ್ನು ಮಾಡಿದರು.