* ಬ್ಯಾಂಕಿಂಗ್ ಕ್ಷೇತ್ರದಲ್ಲಿ 'ಸುಧಾರಣೆ' ತರಲು ಕೇಂದ್ರ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಅನುವಾಗುವ ಮಹತ್ವದ ತಿದ್ದುಪಡಿ ವಿಧೇಯಕ ಮಂಡಿಸುವ ಸಾಧ್ಯತೆಯಿದೆ.* ಮೂಲಗಳ ಪ್ರಕಾರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ಮತ್ತು ಇತರ ಕಾಯ್ದೆಗಳ ತಿದ್ದುಪಡಿಗೆ ಮುಂದಾಗಿದ್ದು, ಇದಲ್ಲದೆ ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕಾಗಿ 'ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1970' ಮತ್ತು 1980ರ ಕಾಯ್ದೆಗೆ ತಿದ್ದುಪಡಿ ತರುವ ಸಾಧ್ಯತೆಗಳಿವೆ ಎನ್ನಲಾಗಿದೆ.* ಸಂಸತ್ತಿನಲ್ಲಿ ಈ ತಿದ್ದುಪಡಿಗಳು ಅಂಗೀಕಾರವಾದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿನ ಸರ್ಕಾರದ ಪಾಲು ಈಗಿನ ಶೇ.51ಕ್ಕಿಂತ ಕಡಿಮೆ ಮಾಡಲು ಸರ್ಕಾರಕ್ಕೆ ಅವಕಾಶ ಸಿಗಲಿದೆ. * 2021ರಂದ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರ ಬ್ಯಾಂಕ್‌ ಕಾಯ್ದೆಗಳ ತಿದ್ದುಪಡಿಗೆ ಸರ್ಕಾರ ಪಟ್ಟಿ ಮಾಡಿತ್ತು, ಆದರೆ ಮಸೂದೆ ಮಂಡಿಸಿರಲಿಲ್ಲ. ಜುಲೈ 22 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಜುಲೈ .23ರಂದು ಬಜೆಟ್ ಮಂಡನೆ ನಡೆಯಲಿದೆ.