Job Description: ➤ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ದೇಶಾದ್ಯಂತ ಪ್ರಮುಖ ಸಾಮಾಜಿಕ ಮಾಧ್ಯಮ ಮತ್ತು ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಮ್ (Telegram) ಬಳಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಜೂನ್ 21 ರಂದು ನಿಗದಿಯಾಗಿರುವ NEET UG ಮರುಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಕಾಯ್ದುಕೊಳ್ಳಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಶಿಫಾರಸಿನ ಮೇರೆಗೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ನಿರ್ಬಂಧದ ಅವಧಿ: 2026ರ ಜೂನ್ 22ರ ವರೆಗೆ ಭಾರತದಾದ್ಯಂತ ಟೆಲಿಗ್ರಾಮ್ ಆ್ಯಪ್ ಆಕ್ಸೆಸ್ ಅನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ. ಮೆಸೇಜ್ ಎಡಿಟಿಂಗ್ ಫೀಚರ್ ಬ್ಯಾನ್: ಕೇವಲ ಆ್ಯಪ್ ನಿರ್ಬಂಧ ಮಾತ್ರವಲ್ಲದೆ, ಈಗಾಗಲೇ ಪೋಸ್ಟ್ ಮಾಡಲಾದ ಸಂದೇಶಗಳನ್ನು ಎಡಿಟ್ ಮಾಡುವ (Message Editing Option) ಫೀಚರ್ ಅನ್ನು ಸಹ ಜೂನ್ 30, 2026 ರವರೆಗೆ ಭಾರತದಲ್ಲಿ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಉದ್ದೇಶ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ನಕಲಿ ಕೀ ಉತ್ತರಗಳ ಹರಡುವಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ದುಷ್ಕೃತ್ಯಗಳನ್ನು ತಡೆಯುವುದು. ➤ ಟೆಲಿಗ್ರಾಮ್ ನಿರ್ಬಂಧಕ್ಕೆ ಕಾರಣ: ಕಳೆದ ಕೆಲವು ಪರೀಕ್ಷೆಗಳ ಸಂದರ್ಭದಲ್ಲಿ ಟೆಲಿಗ್ರಾಮ್ ಚಾನೆಲ್‌ಗಳು ಮತ್ತು ಗ್ರೂಪ್‌ಗಳ ಮೂಲಕ ಪ್ರಶ್ನೆಪತ್ರಿಕೆಗಳು ಹಾಗೂ ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಮರುಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರದು ಮತ್ತು ಪರೀಕ್ಷಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಉಳಿಸಬೇಕು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ತಳೆದಿದೆ. ಟೆಲಿಗ್ರಾಮ್‌ನ ಈ ತಾತ್ಕಾಲಿಕ ನಿರ್ಬಂಧವು ಪರೀಕ್ಷೆಯನ್ನು ಹೆಚ್ಚು ಸುರಕ್ಷಿತ ವಾತಾವರಣದಲ್ಲಿ ನಡೆಸಲು ಸಹಕಾರಿಯಾಗಲಿದೆ ಎಂದು NTA ಪ್ರಕಟಣೆಯಲ್ಲಿ ತಿಳಿಸಿದೆ.ಇನ್ನು ಹೆಚ್ಚಿನ ಪ್ರಚಲಿತ ಘಟನೆಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ