Job Description: * ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ.* ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.* ಫೆ.24 ರಂದು ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‍ನ ಹೈ ಆಲ್ಟಿಟ್ಯೂಡ್ ಟೆಸ್ಟ್ ಫೆಸಿಲಿಟಿಯಲ್ಲಿ ಯೋಜಿತ ಅವಧಿಗೆ 25 ಸೆಕೆಂಡುಗಳ ಕಾಲ ನಡೆದ ಪರೀಕ್ಷೆಯಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.