* ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು ಆಗಸ್ಟ್ 23 ರಂದು ಕೇಂದ್ರ ಚುನಾವಣಾ ಆಯೋಗವು ನೇಮಕ ಮಾಡಿದೆ. * ದೆಹಲಿಯಲ್ಲಿ ಆಗಸ್ಟ್ 23 ರಂದು ನಡೆಯುವ ಸಚಿನ್ ತೆಂಡೂಲ್ಕರ್ ಮತ್ತು ಚುನಾವಣಾ ಸಮಿತಿ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದ್ದು, ಇದು ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ತೆಂಡೂಲ್ಕರ್ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ.* 2022ರಲ್ಲಿ ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಅವರನ್ನು ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಎಂದು ಗುರುತಿಸಲಾಗಿತ್ತು.* 2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಸಚಿನ್ ತೆಂಡೂಲ್ಕರ್ ಅವರು ಮತದಾರರ ಜಾಗೃತಿ ಅಭಿಯಾನ ನಡೆಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.‌* 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಂಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರಂತಹ ದಿಗ್ಗಜರು ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್‌ಗಳಾಗಿದ್ದರು.