* ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು ಈ ನಡುವೆ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದಾರೆ. ಇನ್ನು ಹೊಸ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಮಾರ್ಚ್ 14 ಅಥವಾ 15ರಂದು ಸಭೆ ನಡೆಯುವ ನಿರೀಕ್ಷೆಯಿದೆ. * ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ವಿಪಕ್ಷದಿಂದ ಅಧೀರ್ ರಂಜನ್ ಚೌಧರಿ ಅವರನ್ನು ಮಾರ್ಚ್ 15ರಂದು ಸಭೆಗೆ ಆಹ್ವಾನಿಸಲಾಗಿದೆ.* “ಚುನಾವಣೆಗೂ ಮುನ್ನ ಚುನಾವಣಾಧಿಕಾರಿ ರಾಜೀನಾಮೆ ನೀಡಿರುವುದು ನೋಡುವಾಗ ಆಯೋಗ ಒತ್ತಡದಲ್ಲಿದೆಯೇ ಎಂಬ ಪ್ರಶ್ನೆ ಬರುತ್ತದೆ. * ಈ ರಾಜೀನಾಮೆಯಿಂದಾಗಿ ಚುನಾವಣಾ ಆಯೋಗದ ಮೇಲೆ ಯಾರ ಒತ್ತಡವಿದೆ ಎಂಬ ಪ್ರಶ್ನೆ ಹುಟ್ಟುತ್ತದೆ” ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವ್ರು ಹೇಳಿದ್ದಾರೆ.