Job Description: * ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದೀಗ 100 ಟೆಸ್ಟ್ ಪಂದ್ಯಗಳನ್ನು ಆಡಿದ 12 ನೇ ಭಾರತೀಯ ಕ್ರಿಕೆಟಿಗ ಇವರಾಗಿದ್ದಾರೆ. ರಾಹುಲ್ ದ್ರಾವಿಡ್ ಅವರು ಈ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಅವರಿಗೆ ಸ್ಮರಣಿಕೆಯನ್ನು ನೀಡಿದ್ದಾರೆ. * ಇತ್ತೀಚಿಗೆ ಮೊಹಾಲಿಯಲ್ಲಿ ಶ್ರೀಲಂಕಾ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು 100 ನೇ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಇತ್ತೀಚಿಗೆ ಬಿಸಿಸಿಐ ಕೊಹ್ಲಿ ಅವರನ್ನು ಸನ್ಮಾನಿಸಿದೆ. * BCCI ವತಿಯಿಂದ ಅಧ್ಯಕ್ಷ ಸೌರವ್ ಗಂಗುಲಿ, ಕಾರ್ಯದರ್ಶಿ ಜಯ್ ಶಾ, ಖಜಾಂಚಿ ಅರುಣ್ ಧುಮಾಲ್ ಹಾಗೂ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಈ ಸಮಾರಂಭದಲ್ಲಿದ್ದರು. * ಭಾರತದ ಪರವಾಗಿ 100 ಟೆಸ್ಟ್ ಪಂದ್ಯಗಳನ್ನು ಆಡಿರುವ 12ನೇ ಭಾರತೀಯ ಕ್ರಿಕೆಟರ್'ಗಳು ಸುನೀಲ್ ಗವಾಸ್ಕರ್, ದಿಲೀಪ್ ವೆಂಗ್‌ಸರ್ಕರ್, ಕಪಿಲ್ ದೇವ್, ಸಚಿನ್ ತೆಂಡುಲ್ಕರ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಸೌರವ್ ಗಂಗುಲಿ, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ ಅವರು ಆಡಿದ್ದಾರೆ. * ವಿರಾಟ್ ಕೊಹ್ಲಿ ಅವರೊಬ್ಬ ಭಾರತೀಯ ಅಂತರಾಷ್ಟ್ರೀಯ ಕ್ರಿಕೆಟಿಗ ಹಾಗೂ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ನಾಯಕ. ಇವರು 2013 ಮತ್ತು 2022 ರ ನಡುವೆ ಎಲ್ಲಾ ಮೂರು ಮಾದರಿಗಳಲ್ಲಿ 200 ಕ್ಕೂ ಅಧಿಕ ಪಂದ್ಯಗಳನ್ನೂ ಆಡಿರುವ ಭಾರತದ ಕ್ರಿಕೆಟ್ ತಂಡದ ನಾಯಕರಾಗಿದ್ದರು. * ವಿರಾಟ್ ಕೊಹ್ಲಿ ಅವರು ಈ ಹಿಂದೆ 2011 ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಇವರು ICC ವಿಶ್ವ ಟ್ವೆಂಟಿ 20ಯ 2014 ಹಾಗೂ 2016 ರಲ್ಲಿ ಎರಡು ಬಾರಿ ಪಂದ್ಯಾವಳಿಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅತಿ ವೇಗವಾಗಿ 23,000 ಅಂತರಾಷ್ಟ್ರೀಯ ರನ್'ಗಳನ್ನೂ ಕಲೆಹಾಕಿ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ಈ ಹಿಂದೆ ಇವರಿಗೆ 2013 ರಲ್ಲಿ ಅರ್ಜುನ ಪ್ರಶಸ್ತಿ, ಮತ್ತೆ 2017 ರಲ್ಲಿ ಕ್ರೀಡಾ ವಿಭಾಗದಲ್ಲಿ ಪದ್ಮಶ್ರೀ ಹಾಗೂ 2018 ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. * ಪ್ರಸ್ತುತ ಟೆಸ್ಟ್ ಕ್ರಿಕೆಟ್ ಎಂಬುದು ಕ್ರಿಕೆಟ್‌ ನ ಒಂದು ಸ್ವರೂಪವಾಗಿದೆ, ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿರ್ಧರಿಸಿದಂತೆ ಟೆಸ್ಟ್ ಸ್ಥಾನಮಾನವನ್ನು ಪಡೆದ ರಾಷ್ಟ್ರೀಯ ಪ್ರತಿನಿಧಿ ತಂಡಗಳ ನಡುವೆ ಟೆಸ್ಟ್ ಪಂದ್ಯಗಳನ್ನು ಆಡಿಸಲಾಗುತ್ತದೆ. * ಮೊಟ್ಟ ಮೊದಲ ಟೆಸ್ಟ್ ಪಂದ್ಯವು 1877 ರ ಮಾರ್ಚ್. 15 ಹಾಗೂ 19 ರ ನಡುವೆ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳು ನಡುವೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಡಲಾಯಿತು.