Job Description: * ಪ್ರಸ್ತುತ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರು ಅತಿ ಹೆಚ್ಚು ವಿಕೆಟ್‌ ಗಳನ್ನೂ ಪಡೆದುಕೊಂಡು ದಾಖಲೆಯನ್ನು ನಿರ್ಮಿಸಿದ್ದಾರೆ. * ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ವೆಸ್ಟ್‌ ಇಂಡೀಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತೀಯ ಬೌಲರ್ ಜೂಲನ್ ಗೋಸ್ವಾಮಿ ವಿಕೆಟ್ ಪಡೆಯುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್'ಗಳನ್ನೂ ಪಡೆದುಕೊಂಡಿರುವ ಬೌಲರ್ ಇವರಾಗಿದ್ದಾರೆ. * ವಿಶ್ವಕಪ್‌ನಲ್ಲಿ ಗೋಸ್ವಾಮಿ ಅವರು ಇಲ್ಲಿಯವರೆಗೆ 40 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ, ಈ ಮೊದಲು ಆಸ್ಟ್ರೇಲಿಯಾದ ಸ್ಪಿನ್ನರ್ ಲಿನ್ ಫುಲ್ಸ್‌ಟನ್ ಅವರು 39 ವಿಕೆಟ್‌ ಪಡೆದುಕೊಂಡಿದ್ದರು, ಇದೀಗ ಇವರ ದಾಖಲೆಯನ್ನು ಭಾರತೀಯ ಬೌಲರ್ ಜೂಲನ್ ಗೋಸ್ವಾಮಿ ಅವರು ಮುರಿದಿದ್ದಾರೆ. * ಭಾರತೀಯ ತಂಡವು ವೆಸ್ಟ್‌ ಇಂಡೀಸ್‌ ವಿರುದ್ಧ ಪಂದ್ಯದಲ್ಲಿ 155 ರನ್ ಗಳ ಅಂತರದಿಂದ ಜಯ ಸಾಧಿಸಿದೆ. ಈ ಪಂದ್ಯವು ಸೆಡನ್ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದಿದೆ. * ಜೂಲನ್ ನಿಶಿತ್ ಗೋಸ್ವಾಮಿ ಅವರು ಭಾರತೀಯ ಅಂತರಾಷ್ಟ್ರೀಯ ಕ್ರಿಕೆಟಿಗ ಹಾಗೂ ಭಾರತ ರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿಯಾಗಿದ್ದಾರೆ. ಇವರದು ಬಲಗೈ ಮಧ್ಯಮ ವೇಗದ ಬೌಲಿಂಗ್ ಮಾಡುವ ಆಲ್‌ರೌಂಡರ್ ಆಟಗಾರ್ತಿಯಾಗಿದ್ದಾರೆ. ಇವರು ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ 2018 ರ ಆಗಸ್ಟ್'ನಲ್ಲಿ ಗೋಸ್ವಾಮಿ ಅವರು WT20I ಗಳಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. * ಗೋಸ್ವಾಮಿ ಅವರು ಈ ಹಿಂದೆ 2007 ರಲ್ಲಿ ICC ಮಹಿಳಾ ವರ್ಷದ ಆಟಗಾರ್ತಿ ಪ್ರಶಸ್ತಿ ಹಾಗೂ 2011 ರಲ್ಲಿ ಅತ್ಯುತ್ತಮ ಮಹಿಳಾ ಕ್ರಿಕೆಟಿಗರಿಗಾಗಿ M.A. ಚಿದಂಬರಂ ಟ್ರೋಫಿಯನ್ನು ಪಡೆದುಕೊಂಡಿದ್ದಾರೆ. * ಗೋಸ್ವಾಮಿ ಮಹಿಳಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ, 2018 ರ ಏಪ್ರಿಲ್'ನಲ್ಲಿ ಇವರಿಗೆ ಗೌರವಾರ್ಥವಾಗಿ ಭಾರತೀಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿತ್ತು.