Job Description: * ಇದೀಗ ಕರ್ನಾಟಕ ರಾಜ್ಯ ಸರ್ಕಾರವು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾಗಿರುವ ಪಹಣಿ , ಅಟ್ಲಾಸ್ , ಆದಾಯ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ನಿಟ್ಟಿನಲ್ಲಿ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಾಲನೆ ನೀಡಿದ್ದಾರೆ. * ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಹಳ್ಳಿ,ಪಟ್ಟಣ,ಶಹರಗಳಲ್ಲಿನ ಸರಿ ಸುಮಾರು 1,52,394 ಕುಟುಂಬಗಳ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ದಾಖಲೆಗಳನ್ನು ತಲುಪಿಸುವ ಕಾರ್ಯಕ್ರಮ ಯಶಸ್ವಿಯಾಗಬೇಕಿದೆ ಅಲ್ಲಿನ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ತಿಳಿಸಿದ್ದಾರೆ. * ಪ್ರಸ್ತುತ ಕಂದಾಯ ಸಿಬ್ಬಂದಿಯಾಗಿರುವ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಿಗರು , ರಾಜಸ್ವ ನಿರೀಕ್ಷಕರು , ಉಪ ತಹಶೀಲ್ದಾರ್ , ತಹಶೀಲ್ದಾರರು, ಹಾಗೂ ಇತರ ಇಲಾಖೆಗಳ ಸಿಬ್ಬಂದಿ ಅಧಿಕಾರಿಗಳನ್ನು ಬಳಸಿಕೊಂಡು ಈ ಜಿಲ್ಲೆಯಲ್ಲಿರುವ ಎಲ್ಲಾ ರೈತ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ತಲುಪಿಸಿ, ನಂತರ ಅವರಿಂದ ಸ್ವೀಕೃತಿ ,ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಲಾಗಿದೆ. ಸಾರ್ವಜನಿಕರಿಂದ ಈ ಯೋಜನೆಯ ಬಗ್ಗೆ ಯಾವುದೇ ದೂರುಗಳು ಬಂದರೆ ಅದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದಾರೆ. * ಈ ಯೋಜನೆಯಡಿ ಒಂದು ವೇಳೆ ದಾಖಲೆಗಳು ಮುದ್ರಣವಾಗದೇ ರೈತರಿಗೆ ದಾಖಲೆಗಳನ್ನು ಮುದ್ದಾಂ ತಲುಪಿಸಲು ಆಗದಿದ್ದಲ್ಲಿ, ಅಂತಹ ರೈತರಿಗೆ ಮಾರ್ಚ್. 21 ರಿಂದ 26 ರವರೆಗೆ ನಾಡಕಛೇರಿಯಲ್ಲಿ ಉಚಿತವಾಗಿ ರೈತರಿಗೆ ದಾಖಲೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.