Job Description: * ದಕ್ಷಿಣ ಕನ್ನಡ ಜಿಲ್ಲೆಯ '3' ಜನರಿಗೆ ನರೇಗಾ ರಾಜ್ಯ ಮಟ್ಟದ ಪುರಸ್ಕಾರ ಲಭಿಸಿದೆ. ಹಾಗೂ ಕಡಬ ತಾಲೂಕಿನ ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕ ಭರತ್ ರಾಜ್ ಅವರಿಗೂ ಲಭಿಸಿದೆ. * ಪ್ರಸ್ತುತ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು 2021- 22 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ರಾಜ್ಯಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ, ಹಾಗೂ ಸಿಬ್ಬಂದಿ, ವೈಯಕ್ತಿಕ ಫಲಾನುಭವಿಗಳಿಗೆ ರಾಜಧಾನಿ ಬೆಂಗಳೂರಿನ ವಿಧಾನ ಸೌಧದಲ್ಲಿ ಜರುಗಿದ ರಾಜ್ಯಮಟ್ಟದ ನರೇಗಾ ಹಬ್ಬ 2022 ರಲ್ಲಿ ಪುರಸ್ಕಾರ ನೀಡಿ ಸನ್ಮಾನಿಸಲಾಗಿದೆ. * ಪ್ರಸ್ತುತ 31 ಜಿಲ್ಲೆಗಳ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್'ಗಳ ಆಯ್ಕೆ ಮಾಡಿ ಅದರಲ್ಲಿಯು ವಿಭಾಗದ ಅನುಸಾರವಾಗಿ ಸಾಧನೆಯ ಮಾಡಿರುವವರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. * ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ 2005 (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ) ಅಥವಾ MGNREGA, ಪ್ರಸ್ತುತ ಇದು 'ಕೆಲಸ ಮಾಡುವ ಹಕ್ಕನ್ನು' ಖಾತರಿಪಡಿಸುವ ಗುರಿಯನ್ನು ಒಳಗೊಂಡಿದೆ. ಭಾರತೀಯ ಕಾರ್ಮಿಕ ಕಾನೂನು ಹಾಗೂ ಇದೊಂದು ಸಾಮಾಜಿಕ ಭದ್ರತಾ ಕ್ರಮವಾಗಿದೆ. ಈ ಕಾಯಿದೆಯನ್ನು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರದ ಅಡಿಯಲ್ಲಿ 2005 ರ ಆಗಸ್ಟ್. 23 ರಲ್ಲಿ ಅಂಗೀಕರಿಸಿದ್ದಾರೆ. ಈ ಮಸೂದೆಯನ್ನು ಆ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಡಾ. ರಘುವಂಶ ಪ್ರಸಾದ್ ಸಿಂಗ್ ಅವರು ಸಂಸತ್ತಿನಲ್ಲಿ ಮಂಡಿಸಿದರು. * ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯದ ಭದ್ರತೆಯನ್ನು ವೃದಿಸುವ ಗುರಿಯನ್ನು ಹೊಂದಿದೆ, ಅಷ್ಟೇ ಅಲ್ಲದೇ ಇದು ಪ್ರತಿ ಮನೆಯ ಕನಿಷ್ಠ ಒಬ್ಬ ಸದಸ್ಯನಿಗೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಕೂಲಿ ಉದ್ಯೋಗವನ್ನು ನೀಡುತ್ತದೆ. MGNREGA ಅಡಿಯಲ್ಲಿ ಲಭ್ಯವಿರುವ ಉದ್ಯೋಗಗಳಲ್ಲಿ 3ನೇ ಒಂದು ಭಾಗದಷ್ಟು ಮಹಿಳೆಯರಿಗೆ * ಪ್ರಸ್ತುತ ಗ್ರಾಮ ಪಂಚಾಯತ್‌ಗಳು MGNREGA'ನ್ನು ಅನುಷ್ಠಾನಗೊಳಿಸಬೇಕು. ಹಾಗೂ ಯಾವುದೇ ಗುತ್ತಿಗೆದಾರರ(ಕಾಂಟ್ರಾಕ್ಟ್) ಭಾಗವಹಿಸುವದನ್ನು ನಿಷೇಧಿಸಲಾಗಿದೆ.