Job Description: * ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ. ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. * ಇದೀಗ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ "ಸಹಕಾರ ರತ್ನ" ಪ್ರಶಸ್ತಿ ನೀಡಲು ಸಹಕಾರ ಇಲಾಖೆ ಸಚಿವ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. * ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು, ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದುವರೆಗೆ ಒಟ್ಟು 100 ಅರ್ಜಿಗಳು ಬಂದಿವೆ. ಅವುಗಳಲ್ಲಿ ಹಲವು ಡಿಸಿಸಿ ಬ್ಯಾಂಕ್ ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವವರಿಗೆ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ 20 ಕೋಟಿ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. * ನಟ ಪುನೀತ್ ರಾಜ್‍ ಕುಮಾರ್ ಸಹಕಾರ ಇಲಾಖೆಯ ಉತ್ಪನ್ನ ರಾಯಭಾರಿಯಾಗಿದ್ದರು. ಇದೀಗ ಇವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. * ಪ್ರತಿ ವರ್ಷವು '06' ಜನರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಕಳೆದ ವರ್ಷ ಜಿಲ್ಲೆಗೆ ಒಬ್ಬರಂತೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಸುಮಾರು 40 ರಿಂದ 50 ಜನರಿಗೆ ಪ್ರಶಸ್ತಿ ಹಾಗೂ 15 ಗ್ರಾಂ ಚಿನ್ನದ ಪದಕ, ಪ್ರಮಾಣಪತ್ರವನ್ನು ಪ್ರಧಾನ ಮಾಡಲಾಗುತ್ತದೆ. * ಈ ಹಿಂದೆ 1992 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಸ್ಥಾಪನೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟಾರೆಯಾಗಿ '8' ಜನರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಮರಣೋತ್ತರವಾಗಿ 10 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ.