Job Description: * ಪ್ರಸ್ತುತ ಕೇಂದ್ರ ಸರ್ಕಾರವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಶೇ. 89 ರಷ್ಟು ಸ್ವಾಧೀನಪಡಿಸಿಕೊಂಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಮಾಹಿತಿಯನ್ನು ನೀಡಿದ್ದಾರೆ. * ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದಲ್ಲಿ ಭೂಸ್ವಾಧೀನ ವಿಳಂಬವಾಗುತ್ತಿರುವ ಹಿನ್ನಲೆಯಿಂದಾಗಿ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸಚಿವರು ಲಿಖಿತ ರೂಪದಲ್ಲಿ ಲೋಕಸಭೆಗೆ ಮಾಹಿತಿಯನ್ನು ನೀಡಿದ್ದಾರೆ. * ಇದೀಗ ರೈಲ್ವೆ ಸಚಿವಾಲಯ ಅಗತ್ಯವಿರುವ 1,396 ಹೆಕ್ಟೇರ್ ಭೂಮಿಯಲ್ಲಿ ಸರಿ ಸುಮಾರು 1,248 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ. ಆದರೆ ಮಹಾರಾಷ್ಟ್ರ ರಾಜ್ಯದಲ್ಲಿ ಈ ರೈಲು ಯೋಜನೆಗೆ ಅಗತ್ಯವಿರುವ ಒಟ್ಟು 297.81 ಹೆಕ್ಟೇರ್‌ಗಳಲ್ಲಿ ಶೇ. 68.65 ರಷ್ಟು ಭೂಮಿ ಸ್ವಾಧೀನಪಡಿಸಿಕೊಂಡಿದೆ ಎಂದಿದ್ದಾರೆ. * ಪ್ರಸ್ತುತ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್ ಭಾರತದ ಆರ್ಥಿಕ ಕೇಂದ್ರವಾದ ಮುಂಬೈ ಹಾಗು ಅಹಮದಾಬಾದ್ ನಗರವನ್ನು ಸಂಪರ್ಕಿಸುವ ನಿರ್ಮಾಣ ಹಂತದಲ್ಲಿರುವ ಹೈಸ್ಪೀಡ್ ರೈಲು ಮಾರ್ಗವಾಗಿದೆ. * ಈ ಹೈಸ್ಪೀಡ್ ರೈಲು ಮಾರ್ಗದ ನಿರ್ಮಾಣವು 2028 ರ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಈ ಹೈಸ್ಪೀಡ್ ರೈಲು ಮಾರ್ಗವು ಪೂರ್ಣಗೊಂಡ ಬಳಿಕ ಇದು ಭಾರತದ ಮೊದಲ ಹೈಸ್ಪೀಡ್ ರೈಲು ಮಾರ್ಗವಾಗಲಿದೆ.