Job Description: * DRDO ದಿಂದ ಅಂಡಮಾನ್ ಹಾಗೂ ನಿಕೋಬಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಗೊಳಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ವರದಿ ಮಾಡಿದ್ದಾರೆ. ಈ ಕ್ಷಿಪಣಿಯ ವಿಸ್ತರಿತ ವ್ಯಾಪ್ತಿಯ ಕ್ಷಿಪಣಿ ತನ್ನ ಗುರಿಯನ್ನು ತಲುಪಿದೆ ಎಂದು ತಿಳಿಸಿದ್ದಾರೆ. * ಇತ್ತೀಚಿಗೆ ಭಾರತವು ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಏರ್-ಲಾಂಚ್ಡ್ ಆವೃತ್ತಿಯನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸುತ್ತಿದೆ, ಇದು ಸರಿ ಸುಮಾರು 800 ಕಿ. ಮೀ. ಗಿಂತಲೂ ಅಧಿಕ ದೂರದ ಶತ್ರುಗಳ ಗುರಿಗಳನ್ನು ಹೊಡೆಯವ ನಿರೀಕ್ಷೆ ಇದೆ ಎಂದಿದ್ದಾರೆ. ಈ ಹಿಂದೆ ಪರೀಕ್ಷಿಸಲಾಗಿರುವ ಕ್ಷಿಪಣಿ Su-30MKI ಸುಮಾರು 300 ಕಿ.ಮೀ. ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. * ಕ್ರಮೇಣವಾಗಿ ಬ್ರಹ್ಮೋಸ್ ಕ್ಷಿಪಣಿಯ ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ. ಇದೀಗ 800 ಕಿ.ಮೀ. ಹಾಗೂ ಅದಕ್ಕಿಂತಲೂ ಹೆಚ್ಚಿನ ಗುರಿಗಳನ್ನು ಹೊಡೆಯವ ಸಾಮರ್ಥ್ಯವನ್ನು ಹೊಂದಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ಬ್ರಹ್ಮೋಸ್ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಮೇಲ್ಮೈಯಿಂದ ಮೇಲ್ಮೈಗೆ ಯಶಸ್ವಿಯಾಗಿ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿದೆ. * ಇತ್ತೀಚಿಗಷ್ಟೇ ಭಾರತೀಯ ನೌಕಾಪಡೆಯು ಹಿಂದೂ ಮಹಾಸಾಗರದಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.