Job Description: * ಉಚಿತ ಆಹಾರಧಾನ್ಯ ವಿತರಣೆ ಯೋಜನೆ 'ಪಿಎಂಜಿಕೆವೈ' ಯನ್ನು ಕೇಂದ್ರ ಸರ್ಕಾರವು ಆರು ತಿಂಗಳವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ. * ಇತ್ತೀಚೆ ಕೇಂದ್ರ ಸಚಿವ ಸಂಪುಟ ಸಭೆಯ ಮೋದಿ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. * ಈ ಯೋಜನೆಯನ್ನು ಸರ್ಕಾರವು ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. * ಈ ಹಿಂದೆ 2020 ರ ಮಾರ್ಚ್'ನಲ್ಲಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಜಾರಿಗೆ ತರಲಾಗಿದೆ. * ಈ PMGKY ಯೋಜನೆಯಡಿ ಕೇಂದ್ರವು ಬಡವರಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡುತ್ತದೆ.