Job Description: * ತುಮುಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯಲ್ಲಿನ ಎಲೆರಾಂಪುರ ಗ್ರಾಮ ಪಂಚಾಯಿತಿಯು ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರವನ್ನು ಪಡೆದುಕೊಂಡಿದೆ. * ಈ ಹಿಂದೆ 2010ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗಡಿ ಭಾಗದ ಡಿ.ನಾಗೇನಹಳ್ಳಿ ಗ್ರಾಮದಲ್ಲಿ ಅಂತರ್ಜಲ ವೃದ್ಧಿಗೆ ಅನೇಕ ಕಾಮಗಾರಿಗಳನ್ನು ಕೈಗೊಳಲಾಗಿತ್ತು. ಈ ಹಿನ್ನಲೆಯಿಂದಾಗಿ ಈ ಪ್ರದೇಶದಲ್ಲಿ ಅಂತರ್ಜಲ ಮಟ್ಟವು ವೃದ್ಧಿಯಾಗಿರುವ ಹಿನ್ನಲೆಯಿಂದಾಗಿ ಈ ಗ್ರಾಮಕ್ಕೆ 'ರಾಷ್ಟ್ರೀಯ ನೀರು ಅಭಿವೃದ್ಧಿ ಪ್ರಶಸ್ತಿ ದೊರಕಿದೆ ಎನ್ನಲಾಗಿದೆ. * ಗ್ರಾಮದಲ್ಲಿನ ಸರಿ ಸುಮಾರು 400 ಹೆಕ್ಟೇರ್ ಭೂ ಪ್ರದೇಶದಲ್ಲಿ 85 ಕೃಷಿ ಹೊಂಡ, 5 ಚೆಕ್ ಡ್ಯಾಂ, 8 ಹಳೆಯ ಚೆಕ್ ಡ್ಯಾಂ ಅಭಿವೃದ್ಧಿ ಕಾರ್ಯವು ಸೇರಿವೆ, ಹಾಗೂ ಇನ್ನು ಅನೇಕ ಕೆರೆ ಅಭಿವೃದ್ಧಿಯಾಗಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ 10 ವರ್ಷಗಳಿಂದ ನಿಕ್ರಾ ಯೋಜನೆಯಡಿ ಕೈಗೊಂಡಿರುವ ಅನೇಕ ಕಾಮಗಾರಿಗಳಿಂದಾಗಿ ಅಂತರ್ಜಲ ವೃದ್ಧಿಯಾಗಿ ಎಂದು ತಿಳಿದು ಬಂದಿದೆ. * ಪ್ರಸ್ತುತ ದೇಶದಲ್ಲಿ ಈ ನಿಕ್ರಾ ಯೋಜನೆಯಡಿ 100 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿನ 4 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. * ಇದೀಗ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ರಾಷ್ಟ್ರಮಟ್ಟದ ನೀರು ಸದ್ಬಳಕೆ ಹಾಗೂ ಉಳಿತಾಯದ ಪ್ರಶಸ್ತಿ ದೊರಕಿದೆ. ಈ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರಧಾನ ಮಾಡಿದ್ದಾರೆ. * ಪ್ರಸ್ತುತ ಜಲಸಂಪನ್ಮೂಲ ನಿರ್ವಹಣೆ ಕ್ಷೇತ್ರದಲ್ಲಿ ಅನುಕರಣೀಯ ಕೆಲಸಗಳಿಗಾಗಿ ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇತ್ತೀಚಿಗೆ ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನವದೆಹಲಿಯಲ್ಲಿ 3ನೇ ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. * ಈ ಹಿಂದೆ 2018 ರಲ್ಲಿ ಮೊದಲ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ಜಲ ಶಕ್ತಿ ಸಚಿವಾಲಯವು ಆರಂಭಿಸಿದೆ. 2022 ರ ಒಟ್ಟಾರೆಯಾಗಿ 57 ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು 11 ವಿವಿಧ ವಿಭಾಗಗಳಲ್ಲಿ ರಾಜ್ಯಗಳು, ಸಂಸ್ಥೆಗಳು ಹಾಗೂ ಇತರರಿಗೆ ನೀಡಲಾಗಿದೆ.