Job Description: * ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಹಾಗು ಕ್ರೀಡಾ ಇಲಾಖೆ ವತಿಯಿಂದ ನೀಡಲಾಗುವ 2020-21 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ. * ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಅಲ್ಲದೇ ಜೀವಮಾನ ಸಾಧನೆ ಪ್ರಶಸ್ತಿಗೆ 02 ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲೇ ಈ ಪ್ರಶಸ್ತಿಗಳನ್ನೂ ಪ್ರಧಾನ ಮಾಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. - ಏಕಲವ್ಯ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗಾಗಿ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ಈ ಪ್ರಶಸ್ತಿಯನ್ನು 1993 ರಲ್ಲಿ ಆರಂಭಿಸಿದೆ. ಏಕಲವ್ಯ ಪ್ರಶಸ್ತಿ ಪುರಸ್ಕೃತರಿಗೆ ಏಕಲವ್ಯನ ಕಂಚಿನ ಪ್ರತಿಮೆ, ಸಮವಸ್ತ್ರ, 2 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ. - ಜೀವಮಾನ ಸಾಧನೆ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, 1 ಲಕ್ಷ ನಗದು ಬಹುಮಾನ. - ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, 1 ಲಕ್ಷ ರೂ.ನಗದು ಬಹುಮಾನ. - ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪತ್ರ ಹಾಗೂ 5 ಲಕ್ಷ ನಗದು ಪುರಸ್ಕಾರ ಸಿಗಲಿದೆ.