Job Description: * ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಇತ್ತೀಚಿಗೆ 2022 ರ ಏಪ್ರಿಲ್ 4 ರಂದು ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರದರ್ಶಿಸುವ ಪ್ರದರ್ಶನವನ್ನು ಆಯೋಜಿಸಿದೆ. * ಈ ಪ್ರದರ್ಶನವನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಉದ್ಘಾಟಿಸಿದ್ದಾರೆ. ಈ ಪ್ರದರ್ಶನವು ಸಂಸತ್ತಿನ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಇನ್ನು ಅನೇಕರು ಈ ಪ್ರದರ್ಶನಕ್ಕೆ ಭೇಟಿ ನೀಡಿದರು. * ಪ್ರಸ್ತುತ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ, ಸಂಸ್ಕೃತಿ ಸಚಿವಾಲಯವು ದೇಶಾದಾದ್ಯಂತ 100 ಸ್ಥಳಗಳಲ್ಲಿ ಹಾಗೂ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಬಳಕೆಯ ಮೂಲಕ ಈ ಪ್ರದರ್ಶನವನ್ನು ಪ್ರದರ್ಶಿಸಲಾಗಿದೆ. * ಕೇಂದ್ರ ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ಈ ಪ್ರದರ್ಶನವನ್ನು ಪ್ರಾರಂಭಿಸಲಾಗಿದ. ಈ ಪ್ರದರ್ಶನದಿಂದ ಏಕ್ ಭಾರತ್-ಶ್ರೇಷ್ಠ ಭಾರತ್ ಪರಿಕಲ್ಪನೆಯನ್ನು ಪ್ರದರ್ಶಿಸಲಾಗಿದೆ. * ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಆಯೋಜಿಸಿರುವ ಈ ಪ್ರದರ್ಶನವು 1757 ರಿಂದ 1947 ರವರೆಗಿನ ದೇಶದ ಸ್ವಾತಂತ್ರ್ಯ ಹೋರಾಟವನ್ನು ಪ್ರದರ್ಶಿಸುತ್ತದೆ. ಈ ಪ್ರದರ್ಶನದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿರುವ ದೇಶದ ಅನೇಕ ವೀರರ ಕಥೆಗಳನ್ನು ತೋರಿಸುತ್ತದೆ.