Job Description: * ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ಕೂಡ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಕೇಂದ್ರ ಸರ್ಕಾರದ ಯೋಜನೆಗಳನ್ನು ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ಇದರಿಂದಾಗಿ ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ಸುಲಭವಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆಯೇ ರಾಜೀವ್ ಗಾಂದಿ ವಸತಿ ಯೋಜನೆಯ ಅಡಿಯಲ್ಲಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಾಣ ಮಾಡಿ ಕೊಡಲಾಗುವದು ಎಂದು ತಿಳಿಸಿದ್ದಾರೆ. ಅಲ್ಲಿನ ಪ್ರತಿ ಗ್ರಾಮಪಂಚಾಯತಿ ಕೆರೆಗಳಲ್ಲಿ ಮೀನುಗಾರರಿಗೆ ಕೆರೆಗಳನ್ನು ಮೀಸಲಿಡಲಾಗುತ್ತದೆ, ಹಾಗೂ ಮೀನಿನ ಕೃಷಿಗೆ ಪ್ರೋತ್ಸಾಹ ಒದಗಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. * ಪ್ರಸ್ತುತ ಸ್ತ್ರೀಶಕ್ತಿ ಸಂಘಗಳ ಸಾಲಗಳ ಮರುಪಾವತಿಯು ಶೇ.95 ರಷ್ಟಿದೆ. ಈ ಮರುಪಾವತಿಯು ಮಹಿಳೆಯರ ಪರಿಶ್ರಮ ಹಾಗೂ ಪ್ರಮಾಣಿಕತೆಯನ್ನು ತೋರಿಸುತ್ತದೆ. ರಾಜ್ಯದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾಗಿದೆ. ಹಾಗೂ 500 ಕೋಟಿ ರೂ. ವೆಚ್ಚದಲ್ಲಿ ಆಯಂಕರ್ ಬ್ಯಾಂಕ್ ಜೋಡಿಸಿ ಸ್ತ್ರೀ ಶಕ್ತಿ ಸಂಘಗಳಿಗೆ 1.5 ಲಕ್ಷ ರೂ.ಗಳಷ್ಟು ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ, ಇದರಿಂದಾಗಿ ಸರಿ ಸುಮಾರು 4 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಹಾಗೂ ಆರ್ಥಿಕ ಅಭಿವೃದ್ಧಿ ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ. * ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆ ಪ್ರದೇಶದಲ್ಲಿನ ಮೊಗವೀರ ಸಮುದಾಯದ ಮಕ್ಕಳಿಗೆ ವಸತಿ ನಿಲಯ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದಿದ್ದಾರೆ. ಇದರ ಜೊತೆಗೆ ಮೀನುಗಾರರಿಗೆ ಸುಮಾರು 10 ತಿಂಗಳಿಗೆ ಬೇಕಾಗುವ ಡೀಸೆಲ್ ವೆಚ್ಚವನ್ನು ಸಬ್ಸಿಡಿ ಮೂಲಕ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.