Job Description: * ಪ್ರಸ್ತುತ ತಮಿಳುನಾಡು ರಾಜ್ಯದಲ್ಲಿನ ಪ್ರತಿ ಗ್ರಾಮಗಳಲ್ಲಿ 'ಗ್ರಾಮ ಸಚಿವಾಲಯ' ನಿರ್ಮಾಣ ಮಾಡಲಾಗುವದು ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಅವರು ಘೋಷಣೆ ಮಾಡಿದ್ದಾರೆ. * ಪ್ರಸಕ್ತ ವರ್ಷದಲ್ಲಿಯೇ 600 ಗ್ರಾಮ ಸಚಿವಾಲಯಗಳ ನಿರ್ಮಿಸಲಾಗುತ್ತದೆ, ಈ ಪ್ರತಿಯೊಂದು ಗ್ರಾಮದಲ್ಲಿನ 'ಗ್ರಾಮ ಸಚಿವಾಲಯವನ್ನು' ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. * ಈ ಗ್ರಾಮ ಸಚಿವಾಲಯಗಳ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪ್ರತಿ ಗ್ರಾಮದಲ್ಲಿ ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಅಲ್ಲಿನ ಪಂಚಾಯಿತಿ ಅಧ್ಯಕ್ಷರಿಗೆ ಕೊಠಡಿ, ಕಾನ್ಫರೆನ್ಸ್‌ ಹಾಲ್‌, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಕಚೇರಿಗಳು ಲಭ್ಯವಾಗಲಿವೆ ಎಂದಿದ್ದಾರೆ. * ಈ ಯೋಜನೆಯ ಅಡಿಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ಗ್ರಾಮ ಪಂಚಾಯಿತಿಗಳಿಗೆ 'ಉತ್ತಮರ್‌ ಗಾಂಧಿ ಪ್ರಶಸ್ತಿ' ನೀಡಿ ಗೌರವಿಸಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡಿದ ಒಂದು ಗ್ರಾಮಕ್ಕೆ 10 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಭತ್ಯೆಯನ್ನು 5 ಪಟ್ಟು ಹೆಚ್ಚಿಸಲಾಗುವದು ಎಂದಿದ್ದಾರೆ. * ಪ್ರತಿ ವರ್ಷವು ನಡೆಸಲಾಗುವ ಗ್ರಾಮ ಸಭೆಗಳನ್ನು 4 ರಿಂದ 6 ಕ್ಕೆ ಏರಿಕೆ ಮಾಡಲಾಗಿದೆ. ಸದ್ಯ ಈ ಯೋಜನೆಯು ಆಂಧ್ರಪ್ರದೇಶ ರಾಜ್ಯದಲ್ಲಿ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.