Job Description: * ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಂಬೈನಲ್ಲಿ ನಡೆದ ಮೊಟ್ಟ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಸ್ತುತ ಪ್ರಧಾನಿ ಮೋದಿ ಅವರು ಸ್ವೀಕರಿಸಿದ ಚೊಚ್ಚಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಇದಾಗಿದೆ. * ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ತಮ್ಮ ದೇಶವಾಸಿಗಳಿಗೆ ಸಮರ್ಪಿಸಿದ್ದಾರೆ. ಲತಾ ದೀದಿಯಂತಹ ಅಕ್ಕನ ಹೆಸರಿನಲ್ಲಿ ಪ್ರಶಸ್ತಿ ಬಂದಿರುವದು ಖುಷಿ ವಿಚಾರವಾಗಿದೆ ಎಂದಿದ್ದಾರೆ. * ಈ ಪ್ರಶಸ್ತಿಯು ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಸ್ಥಾಪಿಸಲಾಗಿದೆ, ರಾಷ್ಟ್ರ ನಿರ್ಮಾಣಕ್ಕೆ ಅನುಕರಣೀಯ ಕೊಡುಗೆ ನೀಡಿರುವ ವ್ಯಕ್ತಿಗೆ ಪ್ರತಿ ವರ್ಷವು ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಕುಟುಂಬ ಹಾಗೂ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ.