Job Description: * ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ಹೂಡಿಕೆಯ ದೇಶದ ಮೊಟ್ಟ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್(ಘಟಕ) ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮತ್ತು ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. * '07' ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ ಕಲ್ಪಿಸುವ ನಿರೀಕ್ಷೆಯಿದೆ ಎಂದಿದ್ದಾರೆ, ಈ ಒಪಂದಕ್ಕೆ ಕರ್ನಾಟಕ ಸರ್ಕಾರದ ಪರವಾಗಿ ರಾಜ್ಯ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಮತ್ತು ಐ.ಎಸ್.ಎಂ.ಇ ಪರವಾಗಿ ನಿರ್ದೇಶಕ ಅಜಯ್ ಜಲನ್ ಅವರು ಈ ಒಪಂದಕ್ಕೆ ಸಹಿ ಹಾಕಿದರು. * ಅನೇಕ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ಸಂಧರ್ಭದಲ್ಲಿ ಈ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ ಎನ್ನಲಾಗಿದೆ. ಇದರಿಂದಾಗಿ ಆರ್ಥಿಕ ಪ್ರೋತ್ಸಾಹಕದ ಜೊತೆಗೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದು ಮುಖ್ಯವಾಗಿದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. * ಇದೀಗ ಭಾರತ ಸರ್ಕಾರವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸೆಮಿಕಂಡಕ್ಟರ್ ಮಿಷನ್'ನ್ನು ಅನುಮೋದಿಸಿದೆ, ಈ ಹಿನ್ನಲೆಯಿಂದಾಗಿ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ರಾಜ್ಯ ಮುಂದುವರೆಯಲು ಒಂದು ಅವಕಾಶ ಲಭಿಸಿದಂತಾಗಿದೆ ಎಂದಿದ್ದಾರೆ. * ಈ ಒಪ್ಪಂದ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ. ಸಿ. ಎನ್ ಅಶ್ವತ್ಥ ನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ ಕೃಷ್ಣಾ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಇನ್ನು ಅನೇಕರು ಪಾಲ್ಗೊಂಡಿದ್ದರು.