Job Description: * ಇದೇ ಮೊದಲ ಬಾರಿ ಅಮೆರಿಕಾದ ಕೇಂದ್ರೀಯ ಗುಪ್ತಚರ ಸಂಸ್ಥೆ ಸಿಐಎ(CIA) ನೂತನ ಸಿಟಿಒ(CTO) ಆಗಿ ಭಾರತೀಯ ಮೂಲದ 'ನಂದ್ ಮುಲ್ಚಂದಾನಿ' ಅವರನ್ನು ನೇಮಕ ಮಾಡಿದೆ. * ಭಾರತೀಯ ಮೂಲದ 'ನಂದ್ ಮುಲ್ಚಂದಾನಿ' ಅವರು ದೆಹಲಿಯ ಶಾಲೆಯಲ್ಲಿ ಓದಿದ ವಿದ್ಯಾರ್ಥಿಯಾಗಿದ್ದಾರೆ, ಇದೀಗ ಇವರು ಅಮೆರಿಕದ ಕೇಂದ್ರೀಯ ಗುಪ್ತಚರ ಸಂಸ್ಥೆಯ (CIA) ತನ್ನ ಮೊದಲ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಈ ಮಾಹಿತಿಯನ್ನು CIA ನಿರ್ದೇಶಕ ವಿಲಿಯಂ ಜೆ ಬರ್ನ್ಸ್ ಅವರು ಅಧಿಕೃತವಾಗಿ ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿದ್ದಾರೆ. * ಮುಲ್ಚಂದಾನಿ ಅವರು ಕೇಂದ್ರೀಯ ಗುಪ್ತಚರ ಸಂಸ್ಥೆಯ ಸಿಲಿಕಾನ್ ವ್ಯಾಲಿ ಹಾಗೂ ರಕ್ಷಣಾ ಇಲಾಖೆಯಲ್ಲಿ 25 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಇವರು ಕಂಪ್ಯೂಟರ್ ಸೈನ್ಸ್ ಹಾಗೂ ಗಣಿತದಲ್ಲಿ ಪದವಿಯನ್ನು ಪಡೆದ ಬಳಿಕ ಸ್ಟ್ಯಾನ್‌ಫೋರ್ಡ್‌ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಮಾಸ್ಟರ್ ಆಫ್ ಸೈನ್ಸ್ ಪದವಿಯನ್ನು ಪಡೆದುಕೊಂಡು ಹಾರ್ವರ್ಡ್‌ನಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಈ ಮೊದಲು ಇವರು ಮುಖ್ಯ ತಂತ್ರಜ್ಞಾನ ಅಧಿಕಾರಿ, ಕಾರ್ಯಕಾರಿ ನಿರ್ದೇಶಕರಾಗಿ ರಕ್ಷಣಾ ಇಲಾಖೆಯ ಜಂಟಿ ಕೃತಕ ಬುದ್ಧಿಮತ್ತೆ ಕೇಂದ್ರದಲ್ಲಿಯು ಕೂಡ ಕಾರ್ಯ ನಿರ್ವಹಿಸಿದ್ದಾರೆ.