Job Description: * ಆರ್ಥಿಕ ಬಿಕ್ಕಟ್ಟಿನ ಕಾರಣ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷ ಇವರು ತಮ್ಮ ಸಹೋದರನಾದ ಅಧ್ಯಕ್ಷ ಗೊಟಬಯ ರಾಜಪಕ್ಷ ಅವರಿಗೆ ರಾಜೀನಾಮೆ ಕಳುಹಿಸಿದ್ದಾರೆ. ಇನ್ನು ಇಬ್ಬರು ಸಚಿವರು ರಾಜೀನಾಮೆಯನ್ನು ಘೋಷಿಸಿದ್ದಾರೆ.* ಶ್ರೀಲಂಕಾ 1948 ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರ ಇದೆ ಮೊದಲ ಭಾರಿ ಅತ್ಯಂತ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಈಗ ಎದುರಿಸುತ್ತಿದೆ. ಆಹಾರ, ಔಷಧ, ಇಂಧನ, ಅಡುಗೆ ಅನಿಲದ ಕೊರತೆ ಮತ್ತು ವಿದ್ಯುತ್ ಕಡಿತ ಮುಂತಾದ ಸಮಸ್ಯೆಗಳನ್ನು ಅನುಭವಿಸುತ್ತಿದೆ.* ಶ್ರೀಲಂಕಾದ ಹಣಕಾಸಿನ ಸ್ಥಿತಿ ತೀರಾ ಹದಗೆಟ್ಟಿದೆ ಇದರಿಂದಾಗಿ ಜನ ಸಾಮಾನ್ಯರಿಗೆ ಮೂಲಭೂತ ವಸ್ತುಗಳ ಕೊರತೆ ಉಂಟಾಗುತ್ತಿದೆ, ಅಗತ್ಯ ವಸ್ತುಗಳ ಬೆಲೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ.