Job Description: * 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ)ಮಸೂದೆ' ಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿದೆ. * ಸುಗ್ರೀವಾಜ್ಞೆ ಹೊರಡಿಸಲು ಯಾವುದೇ ಕಾನೂನು ತೊಡಕು ಇಲ್ಲ ಎಂದು ಕಾನೂನು ಮತ್ತು ಸಂಸದೀಯ ಇಲಾಖೆ ಹೇಳಿದೆ. ಆದ್ದರಿಂದ ಗುರುವಾರ ಮೇ 12 ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಪ್ರಸ್ತಾವ ಮಂಡಿಸಲು ಗೃಹ ಇಲಾಖೆ ಟಿಪ್ಪಣಿ ಸಿದ್ದಪಡಿಸಿದೆ. * ವಿಧಾನಸಭೆಯಲ್ಲಿ ಮಂಡಿಸಿದ್ದ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ.* ಕಾಯ್ದೆ ಜಾರಿ ವಿಳಂಬವಾಗಬಾರದು ಎನ್ನುವ ಕಾರಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರವು ನಿರ್ಧರಿಸಿದೆ.