Job Description: * ಆರ್ಥಿಕ ಬಿಕ್ಕಟ್ಟಿನಿಂದ ಸಂಘರ್ಷ ಸ್ಥಿತಿ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ನೂತನ ಪ್ರಧಾನಿಯಾಗಿ ಯುಎನ್‌ಪಿ ನಾಯಕ ರಾನಿಲ್ ವಿಕ್ರಮಸಿಂಘೆ(73) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.* ಈ ಮೂಲಕ ವಿಕ್ರಮಸಿಂಪೌ 5 ನೇ ಬಾರಿಗೆ ಪ್ರಧಾನಿಯಾಗಿದ್ದಾರೆ.* ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಫಕ್ಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಲವು ದಿನಗಳ ಬೆನ್ನಲ್ಲೇ , ವಿರೋಧ ಪಕ್ಷದ ನಾಯಕ ರಾನಿಲ್ ವಿಕ್ರಂಸಿಂಘೆ ಅವರು ಗುರುವಾರ ಸಂಜೆ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.* ಈ ಹಿಂದೆ ಪ್ರಧಾನಿಯಾಗಿದ್ದ ವಿಕ್ರಮಸಿಂಘೆ ಅವರನ್ನು 2018 ರಲ್ಲಿ ಆಗಿನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದರು. ಇದಾಗಿ 2 ತಿಂಗಳ ಬಳಿಕ ವಿಕ್ರಮಸಿಂಘೆ ಅವರನ್ನು ಮತ್ತೆ ಪ್ರಧಾನಿ ಯನ್ನಾಗಿ ನೇಮಕ ಮಾಡಲಾಗಿತ್ತು.* ಶ್ರೀಲಂಕಾದ 225 ಸದಸ್ಯ ಬಲದ ಸಂಸತ್ತಿನಲ್ಲಿ ವಿಕ್ರಮಸಿಂಘೆ ಪಕ್ಷವು ಒಬ್ಬರು ಸಂಸದರನ್ನು ಮಾತ್ರ ಹೊಂದಿದೆ ಎಂಬುದು ವಿಶೇಷ.