Job Description: * ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. * ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗುವುದು ಎಂದು ದುಬೈ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿತ್ತು. * ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ (61) ಆಯ್ಕೆಯಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್ಪಿ ಶನಿವಾರ ವರದಿ ಮಾಡಿದೆ.* ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯ ಮೂರನೇ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ (61) ಆಯ್ಕೆಯಾಗಿದ್ದಾರೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.