Job Description: * ಅಸ್ಪೃಶ್ಯತೆ ತೊಡೆದು ಹಾಕಿ ಸಾಮಾಜಿಕ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯತಿಯಲ್ಲಿ “ ವಿನಯ ಸಾಮರಸ್ಯ " ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ದೀನ್‌ದಯಾಳ್ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. * ಕೊಪ್ಪಳದಲ್ಲಿ ದಲಿತ ವರ್ಗದ ಯುವಕನಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಹೆಸರಿನಲ್ಲೇ ಯೋಜನೆ ಜಾರಿಗೆ ತರಲಾಗುತ್ತಿದೆ.* ' ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿ ' ರಚನೆಗೆ ಈ ಅಭಿಯಾನ ಮುನ್ನುಡಿ ಬರೆಯಲಿದೆ.