Job Description: * ಡಿ.ಎಸ್.ನಾಗಭೂಷಣ 1952 ಫೆಬ್ರವರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. * ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975 ರಿಂದ 1981 ರವರೆಗೆ ಸೇವೆ ಸಲ್ಲಿಸಿದ್ದರು.* ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು.* ಡಿ.ಎಸ್.ನಾಗಭೂಷಣ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನು ದಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ, ನಮ್ಮ ಶಾಮಣ್ಣ, ಕನ್ನಡದ ಮನಸು ಮತ್ತು ಇತರ ಲೇಖನಗಳು ಹಾಗೂ ಕಾಲಕ್ರಮ, ಗಮನ, ಅನೇಕ, ಈ ಭೂಮಿಯಿಂದ ಆ ಆಕಾಶದವರೆಗೆ, ಮರಳಿ ಬರಲಿದೆ ಸಮಾಜವಾದ, ವಸಿಷ್ಠರು ಮತ್ತು ವಾಲ್ಮೀಕಿಯರು, ಹಣತೆ (ಜಿಎಸ್ಸೆಸ್ ಅಭಿನಂದನೆ ಗ್ರಂಥ), ಗಾಂಧಿ ಕಥನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.* ಡಿ.ಎಸ್ ನಾಗಭೂಷಣ ಅವರ ಗಾಂಧೀ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಈ ಪ್ರಶಸ್ತಿಯು ರೂ.1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ.