Job Description: * ಕ್ವಾಡ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್'ನ ಟೋಕಿಯೋಗೆ ಭೇಟಿ ನೀಡಿದ್ದಾರೆ* ಪ್ರಭಾವಿ ಗುಂಪುಗಳ ಸದಸ್ಯ ರಾಷ್ಟ್ರಗಳ ನಡುವಣ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮತ್ತು ಇಂಡೋ ಪೆಸಿಫಿಕ್ ಪ್ರದೇಶದ ಬೆಳವಣಿಗೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಜಪಾನ್‌ಗೆ ತೆರಳಿದರು.* ಶೃಂಗ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಪನೀಸ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಸೇರಿದಂತೆ ಹಲವು ನಾಯಕರು ಈ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.* ಜಪಾನ್ನ 35 ಕ್ಕೂ ಹೆಚ್ಚು ಕಂಪನಿಗಳ ಸಿಇಓಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.* ಭಾರತದಲ್ಲಿ ಹೂಡಿಕೆಗೆ ಜಪಾನ್ ಕಂಪನಿಗಳಿಗೆ ಪ್ರಧಾನಿ ಆಹ್ವಾನ ನೀಡಲಿದ್ದಾರೆ.* ಈ ಶೃಂಗ ಸಭೆಯಲ್ಲಿ ನಾಲ್ಕು ದೇಶಗಳ ನಾಯಕರಿಗೆ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಲು ಮತ್ತು ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಕ್ವಾಡ್‌ ಅವಕಾಶವನ್ನು ಒದಗಿಸುತ್ತದೆ. ನಾವು ಪ್ರಾದೇಶಿಕ ಬೆಳವಣಿಗೆಗಳು ಮತ್ತು ಸಮಕಾಲೀನ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಮಾತುಕತೆಗಳನ್ನು ಮುಂದುವರಿಸುತ್ತೇವೆ' ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.